20/02/2026
_*ಗುರುಪಾದಪ್ಪ ನಾಗಮಾರಪಳ್ಳಿ ಆಸ್ಪತ್ರೆಯಿಂದ ಚಿಂತಾಕಿಯಲ್ಲಿ ಉಚಿತ ಆರೋಗ್ಯ ತಪಾಸಣೆ*_
ಸಹಕಾರಿ ಕ್ಷೇತ್ರದ ಹಿರಿಯ ನಾಯಕರಾದ ಉಮಾಕಾಂತ ನಾಗಮಾರಪಳ್ಳಿ ಅವರ ಜನ್ಮದಿನ ನಿಮಿತ್ತ ಬೀದರಿನ ಗುರುಪಾದಪ್ಪ ನಾಗಮಾರಪಳ್ಳಿ ಮಲ್ಟಿ ಸೂಪರ್ ಸ್ಪೇಷಾಲಿಟಿ ಸಹಕಾರ ಆಸ್ಪತ್ರೆಯಿಂದ ಔರಾದ್ ತಾಲೂಕಿನ ಚಿಂತಾಕಿಯಲ್ಲಿ ನಾರಂಜ ಸಹಕಾರ ಸಕ್ಕರೆ ಕಾರ್ಖಾನೆಯ ಅಧ್ಯಕ್ಷರಾದ ಶ್ರೀ ಸೂರ್ಯಕಾಂತ್ ನಾಗಮಾರಪಳ್ಳಿ ಅವರ ಮಾರ್ಗದರ್ಶನದಲ್ಲಿ *ಉಚಿತ ಆರೋಗ್ಯ ತಪಾಸಣಾ ಶಿಬಿರ* ನಡೆಯಿತು.
ಆಸ್ಪತ್ರೆಯ ತಜ್ಞರ ವೈದ್ಯರು ಆರೋಗ್ಯ ತಪಾಸಣೆ ನಡೆಸಿದರು. 250 ಕ್ಕೂ ಹೆಚ್ಚು ಜನ ಶಿಬಿರದ ಪ್ರಯೋಜನ ಪಡೆದುಕೊಂಡರು. ಗ್ರಾಮೀಣ ಪ್ರದೇಶದಲ್ಲಿ ತಜ್ಞ ವೈದ್ಯರಿಂದ ಆರೋಗ್ಯ ತಪಾಸಣಾ ಶಿಬಿರ ನಡೆಸಿರುವುದಕ್ಕೆ ಸುತ್ತಲಿನ ಗ್ರಾಮಸ್ಥರು ಮೆಚ್ಚುಗೆ ವ್ಯಕ್ತಪಡಿಸಿದರು. ಅಧಿಕ ಸಂಖ್ಯೆಯಲ್ಲಿ ಆರೋಗ್ಯ ತಪಾಸಣೆ ಮಾಡಿಸಿಕೊಂಡರು.
ಗುರುಪಾದಪ್ಪ ನಾಗಮಾರಪಳ್ಳಿ ಸಹಕಾರ ಆಸ್ಪತ್ರೆ ಅಧ್ಯಕ್ಷ ತರುಣ್ ಸೂರ್ಯಕಾಂತ ನಾಗಮಾರಪಳ್ಳಿ, ಪಿಎಸ್‌ಐ ಚಂದ್ರಶೇಖರ, ಗಣ್ಯರಾದ ಕಿಶನರಾವ್ ಪಾಟೀಲ್, ವಿಶಾಲ ಸೌಕಾರ್, ವಿಶ್ವನಾಥ ಗೌಡ, ಹಣಮಂತ ಜಮಾದಾರ್, ಜ್ಞಾನು ಪೂಜಾರಿ, ಕಿರಣ ಚಿಂತಾಕಿ, ಬಸವ ಕೋಟೆ ಮತ್ತಿತರ ಗಣ್ಯರು, ಚಿಂತಾಕಿ ಗ್ರಾಮದ ಹಿರಿಯರು, ಪಂಚಾಯತಿ ಸದಸ್ಯರು, ಮುಖಂಡರು ಉಪಸ್ಥಿತರಿದ್ದರು.