
24/01/2024
*ರಾಷ್ಟ್ರೀಯ ಹೆಣ್ಣು ಮಕ್ಕಳ ದಿನ 2024*
ಸಮಾಜದಲ್ಲಿ ಹೆಣ್ಣು ಮಕ್ಕಳು ಎದುರಿಸುತ್ತಿರುವ ಅಸಮಾನತೆಗಳ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವುದು. *ಹೆಣ್ಣು ಶಿಶು ಹತ್ಯೆ, ಲಿಂಗ ಅಸಮಾನತೆ ಮತ್ತು ದೈಹಿಕ ದೌರ್ಜನ್ಯ* ಸೇರಿದಂತೆ ಇನ್ನಿತರ ಸಮಸ್ಯೆಗಳ ಕುರಿತು ಬೆಳಕು ಚೆಲ್ಲುವುದು. *ಸ್ತ್ರೀಯರ ಶಿಕ್ಷಣದ ಮಹತ್ವ*, ಮಹಿಳೆಯರ ಆರೋಗ್ಯ ಮತ್ತು ಪೋಷಣೆಯ ಪ್ರಾಮುಖ್ಯತೆಯನ್ನು ಉತ್ತೇಜಿಸುವ ಉದ್ದೇಶವನ್ನು ಹೊಂದಿದೆ. *ರಾಷ್ಟ್ರೀಯ ಹೆಣ್ಣುಮಕ್ಕಳ* ದಿನದಂದು ಪ್ರಾಥಮಿಕ ಆರೋಗ್ಯ ಕೇಂದ್ರ ಬಳಗಾನೂರ ನಲ್ಲಿ ಕಾರ್ಯಕ್ರಮಗಳನ್ನು ಆಯೋಜನೆ ಮಾಡುವ ಮೂಲಕ ಆಚರಣೆ ಮಾಡಲಾಯಿತು. ಹೆಣ್ಣು ಮಕ್ಕಳು ಎದುರಿಸುತ್ತಿರುವ ಸಮಸ್ಯೆಗಳು, ಅವರಿಗೆ ಅವಕಾಶಗಳನ್ನು ನೀಡುವ ಕುರಿತು ಜಾಗೃತಿ ಅಭಿಯಾನಗಳನ್ನು ಹಮ್ಮಿಕೊಳ್ಳಲಾಯಿತು....
ಡಾ. ದೌಲಸಾಬ ಮುದ್ದಾಪೂರ,ವೈದ್ಯಾಧಿಕಾರಿಗಳು ಪ್ರಾಥಮಿಕ ಆರೋಗ್ಯ ಕೇಂದ್ರ ಬಳಗಾನೂರ.